ನವದೆಹಲಿ: 500 ರೂ. ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದು ಕೊಳ್ಳುವ ಅಥವಾ 1,000 ರೂ. ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ.
ಆರ್ಥಿಕ ವರ್ಷ 2024 ರ ಎರಡನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಅನಾವರಣಗೊಳಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಬಿಐ 500 ರೂ. ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ 1,000 ರೂ. ಮುಖಬೆಲೆಯ ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಯೋಚಿಸುತ್ತಿಲ್ಲ, ಊಹಾಪೋಹ ಮಾಡದಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.
2,000 ನೋಟುಗಳನ್ನು ಚಲಾವಣೆಯಿಂದ ಹಿಂದೆ ಪಡೆದ ಬಳಿಕ ಮಾರುಕಟ್ಟೆಯಲ್ಲಿದ್ದ 3.62 ಲಕ್ಷ ಕೋಟಿ ರೂ. ಪೈಕಿ 1.82 ಲಕ್ಷ ಕೋಟಿ ರೂ. ಬ್ಯಾಂಕುಗಳಿಗೆ ಮರಳಿದೆ. ಇದರ ಪ್ರಮಾಣ 50% ರಷ್ಟಾಗಿದೆ. ಬ್ಯಾಂಕುಗಳಿಗೆ ಬಂದ ಹಣದ ಪೈಕಿ 85% ರಷ್ಟು ನೋಟುಗಳು ಬ್ಯಾಂಕ್ ಠೇವಣಿಗಳಾಗಿ ಹಿಂತಿರುಗಿದರೆ, ಉಳಿದ ಪ್ರಮಾಣದ ಹಣ ನೋಟು ವಿನಿಮಯಕ್ಕಾಗಿ ಬಂದಿವೆ ಎಂದು ಅವರು ತಿಳಿಸಿದರು.
ಆರ್ಬಿಐ ಮೇ 19 ರಂದು ತನ್ನ ಅತ್ಯಧಿಕ ಮೌಲ್ಯದ 2,000 ರೂ. ಕರೆನ್ಸಿ ನೋಟನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು.
500 ರೂ. ನೋಟ್ ಬ್ಯಾನ್ ಮಾಡಲ್ಲ
![](https://stateroute.in/wp-content/uploads/no-image.jpg)