ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 10,112 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 67,806ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ದೇಶದಲ್ಲಿ ಈವರೆಗಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4.48 ಕೋಟಿಗೆ (4,48,91,989) ಏರಿಕೆಯಾಗಿದೆ.
ಒಂದೇ ದಿನ 29 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,329ಕ್ಕೆ ಜಿಗಿದಿದೆ.
ದೈನಂದಿನ ಪಾಸಿಟಿವಿ ದರ ಶೇಕಡ 7.03ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 5.43ರಷ್ಟಾಗಿದೆ. ಕೋವಿಡ್ ಚೇತರಿಕೆ ದರ ಶೇಕಡ 98.66 ರಷ್ಟಿದೆ.