ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರಿಗೆ ‘ಆಲ್ ದಿ ಬೆಸ್ಟ್‘, ‘ಗುಡ್ ಲಕ್‘ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಸಂಖ್ಯಾಬಲವಿದೆ. ಅವರಿಗೆ ಶುಭಕೋರುತ್ತೇನೆ ಎಂದು ಹೇಳಿದರು.
ಇದೇ ವೇಳೆ ತಾವು ರೆಬೆಲ್ ಅಲ್ಲ. ನಾನು ಬ್ಲಾಕ್ಮೇಲ್ ಮಾಡುವುದಿಲ್ಲ. ನಾನು ಅಪ್ರಬುದ್ಧ ಅಲ್ಲ. ನನಗೆ ದೂರದೃಷ್ಟಿ ಇದೆ. ನಾನು ಪಕ್ಷಕ್ಕೆ ನಿಷ್ಠನಾಗಿರುತ್ತೇನೆ. ನಾನು ಷಡ್ಯಂತ್ರಕ್ಕೆ ಬಲಿಯಾಗುವುದಿಲ್ಲ ‘ ಎಂದು ಅವರು ಹೇಳಿದ್ದಾರೆ.
ನಿನ್ನ ಮೇಲೆ ನಂಬಿಕೆ ಇದೆ ಎಂದು ಸೋನಿಯಾ ಗಾಂಧಿ ಹೇಳಿದ್ದರು. ನಾನು ಇಲ್ಲಿ ಕುಳಿತು ನನ್ನ ಕೆಲಸ ಮಾಡುತ್ತಿದ್ದೇನೆ. ನಿಮಗೆ ಸಾಮಾನ್ಯ ಕೃತಜ್ಞತೆ ಹಾಗೂ ಸೌಜನ್ಯ ಇರಬೇಕು. ಗೆಲುವಿನ ಹಿಂದೆ ಯಾರಿದ್ದಾರೆ ಎಂದು ಒಪ್ಪಿಕೊಳ್ಳುವ ಸೌಜನ್ಯ ಇರಬೇಕು ಎಂದು ಅವರು ಹೇಳಿದ್ದಾರೆ.