ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ವಶಪಡಿಸಿಕೊಂಡಿದೆ.
ಸ್ವಾತAತ್ರ÷್ಯ ದಿನಾಚರಣೆಗೆ ಇನ್ನು ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಪಾಲಕ್ಕಾಡ್ ರೈಲ್ವೆ ವಿಭಾಗದ ಅಪರಾಧ ತನಿಖಾ ದಳ ಹಾಗೂ ರಾಜ್ಯ ಅಬಕಾರಿ ಇಲಾಖೆಯೊಂದಿಗೆ ಆರ್ಪಿಎಫ್ ತಂಡವು ರೈಲುಗಳಲ್ಲಿ ತಪಾಸಣೆ ನಡೆಸುತ್ತಿದೆ.
ಗುರುವಾರ ಕಾರವಾರ-ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿಯೂ ತಪಾಸಣೆ ನಡೆಸಲಾಗಿದ್ದು, ಈ ವೇಳೆ ರೈಲಿನಲ್ಲಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಎಕ್ಸ್ಪ್ರೆಸ್ ರೈಲಿನ ಜನರಲ್ ಕೋಚ್ನಲ್ಲಿ ಗಾಂಜಾ ಇರುವ ಲಗೇಜ್ ಪತ್ತೆಯಾಗಿದೆ. ಆದರೆ, ಬ್ಯಾಗ್ ಯಾರದ್ದು ಎಂಬುದು ತಿಳಿದುಬಂದಿಲ್ಲ. ಇದರಂತೆ ಆರ್ಪಿಎಫ್ ಸಿಬ್ಬಂದಿ ಬ್ಯಾಗ್ ಅನ್ನು ವಶಪಡಿಸಿಕೊಂಡು, ಅಬಕಾರಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಈ ಸಂಬAಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.