ಮೈಸೂರು: ಮಹಿಷ ದಸರಾ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮವನ್ನು ಅ.13ರಂದು ಹಮ್ಮಿಕೊಂಡಿರುವುದಾಗಿ ಸಂಸದ ಪ್ರತಾಪಸಿಂಹ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು, ಹೈದರಾಲಿ ಕಾಲ ಬಿಟ್ಟರೆ 414 ವರ್ಷದಿಂದ ನಿರಂತರವಾಗಿ ಮೈಸೂರು ದಸರಾ ನಡೆದುಕೊಂಡು ಬರುತ್ತಿದೆ. ಮೈಸೂರು ಜನರಿಗೆ ದಸರಾ ಅಂದರೆ ಏನು? ನವರಾತ್ರಿ ಅಂದರೆ ಏನು ಎಂಬುದು ಗೊತ್ತಿದೆ. ಈ ಮಧ್ಯೆ 2015-16ರಲ್ಲಿ ಮಹಿಷ ದಸರಾ ಎನ್ನುವ ಅಸಹ್ಯ, ಅಪದ್ಧವನ್ನು ಕೆಲವರು ಹುಟ್ಟುಹಾಕಿದ್ದಾರೆ.
ಆಗ ಸಿಎಂ ಸಿದ್ದರಾಮಯ್ಯನವರ ಸರ್ಕಾರವೇ ಇತ್ತು. ಆಗ ಆದ ಸಣ್ಣ ಉದಾಸೀನ ತೋರಿದರು. ಅಂದು ಮಹಿಷಾನಿಗೆ ಹೂ ಹಾಕಿ
ಚಾಮುಂಡಿಯನ್ನು ದೆವ್ವ ಎಂದರು. ಬೆಟ್ಟಕ್ಕೆ ಹೋಗಿ ದೆವ್ವವನ್ನ ದೇವರು ಅಂತ, ದೇವರನ್ನ ದೆವ್ವ ಅಂತ ಹೇಳುವ ಕೆಲಸ ಆಯಿತು. ನಂತರದ ವರ್ಷ ಮಹಿಷನ ಮೆರವಣಿಗೆ ಮಾಡಲಾಯಿತು.
ಆಗಿನ ಸಿದ್ದರಾಮಯ್ಯ ಸರ್ಕಾರ ಅದನ್ನ ನಿಲ್ಲಿಸಲಿಲ್ಲ.
ಇಲ್ಲಿ ಭಕ್ತರ ಭಾವನೆಗೆ ನೋವಾಗುವ ಅಸಹ್ಯವನ್ನು ನಿಲ್ಲಿಸುವ ಮನವಿಗೆ ಸಚಿವ ಸೋಮಣ್ಣ ಸ್ಪಂದಿಸಿ ನಿಲ್ಲಿಸಲು ನಾಂದಿ ಹಾಡಿದರು.2018 ರಿಂದ
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿ ಇಂತಹ ಅಸಹ್ಯವನ್ನು ಮಟ್ಟ ಹಾಕುವ ಕೆಲಸ ಆಗಿದೆ ಎಂದರು.
ಈಗ ಸಿದ್ದರಾಮಯ್ಯ ಸರ್ಕಾರ ಬಂದಾಗ ಅವರು ಮತ್ತೆ ಹೆಚ್ಚಿಕೊಂಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ಆಚರಣೆ ಮಾಡುವ ಮಾತು ಆಡುತ್ತಿದ್ದಾರೆ. ಇದನ್ನ ತಡೆಯುವ ನಿಟ್ಟಿನಲ್ಲಿ ಅ. 13 ರಂದು ಚಾಮುಂಡಿ ಬೆಟ್ಟ ಚಲೋ ಜಾಥ ನಡೆಸುತ್ತೇವೆ.
ಇದರಲ್ಲಿ 5 ಸಾವಿರ ನಾಗರೀಕರು ಪಾಲ್ಗೊಳ್ಳುತ್ತಾರೆ. ಚಾಮುಂಡಿ ಬೆಟ್ಟದ ಪಾದ ಹಾಗೂ ವಿಶ್ವವಿದ್ಯಾಲಯದ ಆವರಣದಿಂದ ಜನ ತೆರಳುತ್ತಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ, ದೇವಿಗೆ ಪೂಜೆ ಸಲ್ಲಿಸಿ ದಿನವಿಡಿ ಕಾರ್ಯಕ್ರಮ ನಡೆಸುತ್ತೇವೆ. ಜಿಲ್ಲಾಧಿಕಾರಿ ಹಾಗು ಸಿಟಿ ಪೊಲೀಸ್ ಕಮಿಷನರ್ ಬಳಿ ತೆರಳಿ ಮಹಿಷ ದಸರಾಗೆ ಅನುಮತಿ ನೀಡದಂತೆ ಮನವಿ ಮಾಡುತ್ತೇವೆ ಎಂದರು. ಇದು ಭಾರತೀಯ ಜನತಾ ಪಕ್ಷದ ಕಾರ್ಯಕ್ರಮ ಅಲ್ಲ. ಮತ್ತೆ ಮಹಿಷ ದಸರಾ ತಡೆಗಟ್ಟುವ ಕಾರ್ಯಕ್ರಮವಾಗಿದ್ದು, ಇದರಲ್ಲಿ ಮೈಸೂರಿನ ಎಲ್ಲಾ ಪ್ರಜ್ಞಾವಂತ ನಾಗರೀಕರು ಭಾಗಿಯಾಗಿ ಬಹುಸಂಖ್ಯಾತರ ಭಾವನೆ ರಕ್ಷಣೆ ಮಾಡುವ ಕೆಲಸ ಮಾಡೋಣ. ಮೈಸೂರಿನ ನಾಗರೀಕರಿಗೆ ಚಲೋ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಈ ಮೂಲಕ ಕರೆನೀಡುತ್ತೇನೆಂದರು. ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಇದೇ ವೇಳೆ ಶಾಸಕ ಶ್ರೀವತ್ಸ, ಬಿಜೆಪಿ ಮಾದ್ಯಮ ವಕ್ತಾರರಾದ ಮಹೇಶ್ ರಾಜೇ ಅರಸ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.