ಮೈಸೂರು: ರಾಜ್ಯ ನೌಕರರ ಸಂಘದ ಜಿಲ್ಲಾ ಶಾಖೆಯಿಂದ 2022-23 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅ.8 ರಂದು ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಆಯೋಜಿಸಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಅಂದು ಬೆಳಿಗ್ಗೆ11ಕ್ಕೆ ಪತ್ರಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದು, ಮಹಾಪೌರ ಶಿವಕುಮಾರ್ ಸೇರಿ ಎಲ್ಲಾ ಶಾಸಕ, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ಭಾಗವಹಿಸುವರೆಂದು ಹೇಳಿದರು.
ಎಸ್ ಎಸ್ ಎಲ್ ಸಿಯಲ್ಲಿ 119 ಹಾಗೂ ಪಿಯುಸಿಯಲ್ಲಿ 128 ಒಟ್ಟು 248 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವುದಾಗಿ ತಿಳಿಸಿದರು.