ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಖ್ಯಾತ ಸಂಗೀತ ನಿದೇರ್ಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ಉದ್ಘಾಟಿಸಿದರು.
ಬರಗಾಲ ಸಂಭವಿಸಿರುವ ಸಂದರ್ಭದಲ್ಲಿ ಸರಳವೂ ಅಲ್ಲದೆ ಅದ್ದೂರಿಯೂ ಅಲ್ಲದೆ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕಯಮಾರ್ ಅವರ ಸಮ್ಮುಖದಲ್ಲಿ 10.15 ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ವಿಶೇಷ ಪೂಜೆಯೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಸಾಂಪ್ರದಾಯಿಕ ದಸರಾ ಆಚರಣೆಯಲ್ಲಿ ನಂದಿಧ್ವಜ ಕುಣಿತದ, ನಾದಸ್ವರದ ಮೂಲಕ ಉದ್ಘಾಟಕರು ಮತ್ತು ಗಣ್ಯರನ್ನು ಸ್ವಾಗತಿಸಲಾಯಿತು.
ಬೆಳ್ಳಿ ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಮಳೆ ಬೆಳೆಯಾಗಿ ಸಮೃದ್ಧಿಗೊಳ್ಳಲಿ ಎಂದು ಹರಸಿದರು.
ದಸರಾ ಯದ್ಘಾಟನೆಯನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಜನರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು.