ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ಮನ್ ಗ್ರಹಾಮ್ ಥೊರ್ಪ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ತಮ್ಮ 55ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾಲ್ಕು ದಿನಗಳ ಹಿಂದಷ್ಟೇ ಅಂದರೆ ಆಗಸ್ಟ್ 01 ರಂದು ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರ ಅನಾರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ. ಮಾಧ್ಯಮಗಳ ವರದಿ ಪ್ರಕಾರ.. ಅವರು ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ಗಳಾದ ತೆಂಡೂಲ್ಕರ್, ಸೆಹ್ವಾಗ್ ಅವರಂತಹ ಆಟಗಾರರು ಆಡುತ್ತಿದ್ದ ಸಮಯದಲ್ಲಿ ಥೋರ್ಪ್ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದರು.100 ಟೆಸ್ಟ್ ಪಂದ್ಯಗಳನ್ನು ಆಡಿದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳಲ್ಲಿ ಥೋರ್ಪ್ ಕೂಡ ಒಬ್ಬರು. ಅವರ ನಿಧನದ ಸುದ್ದಿ ತಿಳಿದು ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ಅವರು ಭಾರತದ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
1993 ರಿಂದ 2005 ರವರೆಗೆ ಇಂಗ್ಲೆಂಡ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದಾರೆ. 100 ಟೆಸ್ಟ್ ಮತ್ತು 82 ODI ಪಂದ್ಯಗಳನ್ನೂ ಆಡಿದ್ದಾರೆ. ಟೆಸ್ಟ್ನ 179 ಇನ್ನಿಂಗ್ಸ್ಗಳಲ್ಲಿ ಬ್ಯಾಟಿಂಗ್ ಮಾಡಿರುವ ಅವರು 44.66 ಸರಾಸರಿಯಲ್ಲಿ 6744 ರನ್ಗಳನ್ನು ಗಳಿಸಿದ್ದರು. 200* ಅವರ ಅತ್ಯಧಿಕ ಸ್ಕೋರ್ ಆಗಿದೆ. 16 ಶತಕ, 39 ಅರ್ಧ ಶತಕಗಳನ್ನು ಬಾರಿಸಿದ್ದರು.