ಕೊಳ್ಳೇಗಾಲ:- ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ರಾತ್ರಿ ವೇಳೆ ತಾಲ್ಲೂಕು ಕಚೇರಿಯಲ್ಲಿರುವ ಶಾಸಕ ಕಚೇರಿಯನ್ನು ತೆರೆದು ಕೆಲಸ ಮಾಡುತ್ತಿದ್ದವರ ಮೇಲೆ ಚುನಾವಣೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಎನ್. ಮಹೇಶ್ ಅವರ ಶಾಸಕ ಕಚೇರಿ ಕಂಪ್ಯೂಟರ್ ಆಪರೇಟರ್ ಕಿರಣ್ ಎಂಬಾತನನ್ನು ಚುನಾವಣಾಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ.
ಶಾಸಕರ ಕಚೇರಿ ತೆರೆದು ಕೆಲವೊಂದು ಕಡತಗಳನ್ನು ಕಿರಣ್ ಪರಿಶೀಲನೆ ಮಾಡುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರೊಬ್ಬರು ಚುನಾವಣೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ಆಧಾರದ ಮೇಲೆ ಚುನಾವಣೆ ಅಧಿಕಾರಿ ಚಿನ್ಮಯ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನ ವೇಳೆಯಲ್ಲಿ ಕೆಲವು ಕೆಲವು ದಾಖಲಾತಿಗಳು ಹಾಗೂ ಫಲಾನುಭವಿಗಳ ಪಟ್ಟಿ ದೊರೆತಿದೆ.
ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದೇನೆ ಪರಿಶೀಲನೆ ವೇಳೆಯಲ್ಲಿ ಕೆಲವು ದಾಖಲಾತಿಗಳು ಸಿಕ್ಕಿವೆ. ಮುಂದಿನ ಕ್ರಮಗಳನ್ನು ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಜರುಗಿಸಲಾಗುವುದು ಎಂದು ಚುನಾವಣಾಧಿಕಾರಿ ಚಿನ್ಮಯ್ ತಿಳಿಸಿದರು