ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಎರಡೇ ದಿನ ಬಾಕಿ ಇದೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಕೆಲವು ಕಡೆಗಳಲ್ಲಿ ಗಲಾಟೆಯೂ ಆಗಿದೆ.
ಮೈಸೂರಿನ ಕೆ.ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಜಟಾಪಟಿಯಾಗಿದೆ. ಬೀಚನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಮತಯಾಚನೆ ವೇಳೆ ಕಾಂಗ್ರೆಸ್- ಜೆಡಿಎಸ್ ಮಧ್ಯೆ ಮಾತಿನ ಚಕಮಕಿ ಆಗಿದೆ. ಸಾ.ರಾ.ಮಹೇಶ್ ಪುತ್ರ ಸಾರಾ. ಧನುಷ್ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.