ಬೆಂಗಳೂರು:- ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು ನೂತನ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುಂತೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ಇಂದಿರಾಗಾಂದಿ ಭವನದಲ್ಲಿ ನಡೆದ ಶಾಸಕಾಂಗ ಪಕ್ಣದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವೀಕ್ಷರಕಾದ ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕಾಗಿ ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸಿದರು ಬಳಿಕ ಡಾ. ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಆರ್ ವಿ ದೇಶಪಾಂಡೆ, ಎಂ.ಬಿ ಪಾಟೀಲ್, ಕೆ.ಎಚ್ ಮುನಿಯಪ್ಪ ,ಲಕ್ಷ್ಮಿ ಹೆಬ್ಳಾಕರ್ , ತನ್ವೀರ್ ಸೇಠ್, ಸೇರಿ ಎಲ್ಲ ಶಾಸಕರು ಅದಕ್ಕೆ ಅನುಮೋದನೆ ನೀಡಿದರು.
ಬಳಿಕ ಕೇಂದ್ರದ ವೀಕ್ಷಕರು ಸಿದ್ಧರಾಮಯ್ಯ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು. ನಂತರ ಎಲ್ಲ ಶಾಸಕರು ನೂತನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.
ಬಳಿಕ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು
ಕಾಂಗ್ರೆಸ್ ಪಕ್ಷದ ನಿಯೊಗದಲ್ಲಿ ರಾಜ್ಯ ಉಸ್ರುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಹಿರಿಯ ನಾಯಕರಾದ ಬಿ.ಕೆ ಹರಿಪ್ರಸಾದ್ , ಆರ್ ವಿ ದೇಶಪಾಂಡೆ, ಸಲೀಂ ಅಹಮ್ಮದ್ ಸೇರಿದಂತೆ ಹಲವು ನಾಯಕರು ಇದ್ದರು.
ಶನಿವಾರ ಪ್ರಮಾಣವಚನ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಮಾಹಿತಿಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಲ್ಹೋಟ್ ಅವರಿಗೆ ಮಾಹಿತಿ ನೀಡಿ ಅಧಿಕೃತವಾಗಿ ಅನುಮತಿ ಪಡೆದರು.
ಸಿದ್ದು,ಡಿಕೆಶಿಗೆ ಸಿಹಿ ತಿನ್ನಿಸಿದ ರಾಜ್ಯಪಾಲರು
ಸರ್ಕಾರ ರಚನೆಗೆ ನೂತನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಕ್ಕು ಮಂಡಿಸುತ್ತಿದ್ದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಿಯೋಜಿತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಹಿ ತಿನ್ನಿಸಿ ಶುಭ ಕೋರಿದರು.
ಬಿಗಿ ಭದ್ರತೆ
ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಭವನಕ್ಕೆ ಭೇಟಿಯ ಹಿನ್ನೆಲೆಯಲ್ಲಿ ಬಾರಿ ಬಿಗಿ ಭದ್ರತೆ ಒದಗಿಸಲಾಗಿತ್ತು.