ಚಾಮರಾಜನಗರ- ಶಾಸಕ ಪುಟ್ಟರಂಗಶೆಟ್ಟಿ ರವರಿಗೆ ಸಚಿಸ ಸ್ಥಾನ ನೀಡುವಂತೆ ಒತ್ತಾಯಿಸಿ ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದವರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಸಾವಿರಾರು ಉಪ್ಪಾರ ಜನಾಂಗದವರು
ಪುಟ್ಟರಂಗಶೆಟ್ಟಿ ಸತತವಾಗಿ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆ ಆಗಿರುತ್ತಾರೆ. ಇಡೀ ರಾಜ್ಯದಲ್ಲಿಯೇ ಉಪ್ಪಾರ ಜನಾಂಗದ ಏಕೈಕ ಶಾಸಕರಾಗಿರುತ್ತಾರೆ. ಹಲವಾರು ವರ್ಷಗಳಿಂದ ಎಲ್ಲಾ ಚುನಾವಣೆಗಳಲ್ಲಿಯೂ ಉಪ್ಪಾರ ಸಮುದಾಯವು ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿರುತ್ತದೆ.
ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಚುನಾವಣಾ ಪ್ರಚಾರದಲ್ಲಿ ತಿಳಿಸಿದಂತೆ ಶಾಸಕ ಪುಟ್ಟರಂಗಶೆಟ್ಟಿ ರವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಹಾಗೂ ಸೋಮವಾರ ಚಾಮರಾಜನಗರ ಬಂದ್ ಮಾಡಲಾಗುವುದು ಎಂದು ಉಪ್ಪಾರ ಸಮಾಜದ ಮುಖಂಡರುಗಳು ಸರ್ಕಾರಕ್ಕೆ ಎಚ್ಷರಿಕೆ ನೀಡಿದ್ದಾರೆ.