ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಗೆ, ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ಸಿಎಂ ಆದ ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡುತ್ತಿದ್ದು ಇಂದು ಸುತ್ತೂರು ಹೆಲಿಪ್ಯಾಡ್ ಗೆ ಬಂದಿಳಿದರು. ಸಿಎಂ ಸಿದ್ಧರಾಮಯ್ಯಗೆ ಭರ್ಜರಿ ಸ್ವಾಗತ ಕೋರಲಾಯಿತು. ನಂಜನಗೂಡು ತಾಲ್ಲೂಕು ಬಿಳಿಗೆರೆ ಗ್ರಾಮದಲ್ಲಿ ನಡೆಯುವ ಕೃತಜ್ಞತಾ ಸಮಾವೇಶದಲ್ಲಿ ಸಿದ್ಧರಾಮಯ್ಯ ಭಾಗಿಯಾಗಲಿದ್ದಾರೆ.
ಸುತ್ತೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನಾಳೆ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದೇವೆ. ಎಲ್ಲರೂ ಉಚಿತ ಯೋಜನೆ ಪಡೆಯಬೇಕೆಂದು ಕಡ್ಡಾಯವಲ್ಲ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಲಿಲ್ಲ ಎಂದರು.
ರಾಜ್ಯದ ಜಿಎಸ್ಟಿ ಪಾಲಿಗೆ ಒತ್ತಾಯ ವಿಚಾರವಾಗಿ ನ್ಯಾಯಯುತವಾಗಿ ಕೇಂದ್ರದಿಂದ ನಮಗೆ ಬೇಕಾದ ಹಣವನ್ನ ಒತ್ತಾಯ ಪೂರ್ವಕವಾಗಿ ಕೇಳುತ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಳೆ ಕೊರತೆ ಆತಂಕ ವಿಚಾರವಾಗಿ ಸೋಮವಾರ ಕುಡಿಯುವ ನೀರಿನ ಸಂಬಂಧ ಅಧಿಕಾರಿಗಳ ಸಭೆ ಕರೆಯಲಾಗಿದೆ.
ಮಳೆ ಸಮಸ್ಯೆ ಇರುವ ಜಿಲ್ಲಾಧಿಕಾರಿಗಳ ಜೊತೆ ಕೂಡ ವೀಡಿಯೋ ಕಾನ್ಫರೆನ್ಸ್ ಮಾಡಿ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಲಾಂಚ್ ಆಗುತ್ತೆ. ಜುಲೈ 1 ರಂದೇ ಹತ್ತು ಕೆಜಿ ಆಹಾರ ಧಾನ್ಯ ಕೊಡುವ ಯೋಜನೆ ಮೈಸೂರಿನಲ್ಲಿ ಚಾಲನೆ.
ಜುಲೈ 16 ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಆಗುತ್ತೆ. 2022-23ರಲ್ಲಿ ಪಾಸ್ ಆದ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು 24 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಹಣ. ಮಧ್ಯೆ ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕರೆ ಹಣ ಸಿಗುವುದಿಲ್ಲ ಎಂದು ಹೇಳಿದರು.
ವರುಣಾವನ್ನು ತಾಲ್ಲೂಕು ಕೇಂದ್ರ ಮಾಡಬೇಕೆಂಬ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ವರುಣಾ ಜನ ಕೇಳಿದ್ರೆ ಮಾಡುತ್ತೇವೆ. ಬಸವರಾಜ ಬೊಮ್ಮಾಯಿ ಹೇಳಿದ್ರೆ ಮಾಢುವುದಿಲ್ಲ. ಪಿಎಸ್ ಐ ನೇಮಕಾತಿ ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಸಚಿವರಾದ ಕೆ.ವೆಂಕಟೇಶ್ ಹಾಗೂ ಇತರೆ ಗಣ್ಯರು ಉಪಸ್ಧಿತರಿದ್ದರು.