ಮಂಡ್ಯ:- ಸಾವಿನ ಹೆದ್ದಾರಿ ಎನ್ನುವ ಕುಖ್ಯಾತಿ ಗಳಿಸುತ್ತಿರುವ ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ವೇಯಲ್ಲಿ ಉದ್ಘಾಟನೆಯಾದ ಕೆಲವೇ ತಿಂಗಳುಗಳಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ 100 ದಾಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಮದ್ದೂರು ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಫ್ಲೈಓವರ್ ರಸ್ತೆಯಲ್ಲಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕೋಲಾರ ಹಾಗೂ ಕೊಪ್ಪಳ ಮೂಲದ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಮೃತಪಟ್ಟವರು.
ವಾರಾಂತ್ಯದ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗ್ಗಿನ ಜಾವ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.