ಹಾಸನ : ಚಲಿಸುತ್ತಿದ್ದ ನೀರನ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಎನ್.ಹೆಚ್. ರಸ್ತೆಯಲ್ಲಿ ಡ್ರೈನೇಜ್ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಅಯ್ಯಪ್ಪ( ೨೨ ) ಎನ್ನುವ ವ್ಯಕ್ತಿ ಸಾವನಪ್ಪಿದ್ದು , ಮತ್ತೊರ್ವ ಕಾರ್ಮಿಕನಿಗೆ ಗಂಭೀರವಾದ ಗಾಯಗಳಾದ ಘಟನೆ ಹಾಸನ ನಗರದ ಹೊರವಲಯ ಬೂವನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೆಲಸ ಮಾಡುತ್ತಿದ್ದಾಗ ಕಾಮಗಾರಿಯ ಕ್ಯೂರಿಂಗ್ ಮಾಡುವ ಉದ್ದೇಶದಲ್ಲಿ ನೀರು ಸರಬರಾಜು ಮಾಡಲು ವಾಟರ್ ಟ್ಯಾಂಕರ್ ಬಂದಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಟರ್ ಟ್ಯಾಂಕರ್ ಹತ್ತಿರದಲ್ಲೆ ಕೆಲಸ ಮಾಡುತ್ತಿದ್ದ ಅಯ್ಯಪ್ಪನ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೆ ಮೃತಪಟ್ಟರೇ ಮತ್ತೊಬ್ಬ ಕೂಲಿ ಕಾರ್ಮಿಕ ಗಂಬೀರವಾಗಿ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ನೀರನ ಟ್ಯಾಂಕರ್ ವಾಹನದ ಬ್ರೇಕ್ ಫೇಲೂರ್ ಆಗಿ ಈ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ವಿಷಯ ತಿಳಿದ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
ವರದಿ : ಸುಚಿತ್ರ ಗೌಡ