ಮಂಡ್ಯ:- ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಬಾಗಿನ ಅರ್ಪಿಸಿದರು.
ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕೆಆರ್ಎಸ್ಗೆ ಸಿದ್ದರಾಮಯ್ಯ ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
ಯಾವಾಗಲೂ ಜಲಾಶಯ ಭರ್ತಿಯಾದ ಅಥವಾ ಭರ್ತಿಯಾಗಿ ೩ನೇ ದಿನ ಬಾಗಿನ ಸಲ್ಲಿಸುವುದು ವಾಡಿಕೆ. ಈ ಬಾರಿ ಜಲಾಶಯ ತುಂಬಿದ ಐದಾರು ದಿನಗಳ ಬಳಿಕ ಬಾಗಿನ ಸಲ್ಲಿಕೆಯಾಗಿತು. ಕಾರ್ಯಕ್ರಮದಲ್ಲಿ ವಾಡಿಕೆಯಂತೆ ಡಿಸಿಎಂ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.
ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆ ಕೆಆರ್ಎಸ್ ಡ್ಯಾಮ್ನ್ನು ಹೂ ಹಾಗೂ ಕನ್ನಡ ಧ್ವಜಗಳನ್ನು ಹಾಕಿ ಅಲಂಕಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಸಿಂಗರಿಸಲಾಗಿದೆ. ಉಸ್ತುವಾರಿ ಸಚಿವ್ರಾದ ಚೆಲುವರಾಯಸ್ವಾಮಿ, ಡಾ.ಹೆಚ್.ಸಿ.ಮಹಾದೇವಪ್ಪ ಸೇರಿದಂತೆ ಮಂಡ್ಯ ಜಿಲ್ಲಾ ಶಾಸಕರು ಸಾಥ್
ಇಂದು ಸಂಜೆ ಮೂರು ಗಂಟೆಗೆ ಮೈಸೂರಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಿಸಲಿದ್ದಾರೆ.