ಮೇಷ ರಾಶಿ: ಸಮಸ್ಯೆಗಳ ಬಗ್ಗೆ ಅತಿಯಾಗಿ ತಲೆಕೆಡಿಸಿಕೊಳ್ಳದೆ ಧೈರ್ಯದಿಂದ ಎದುರಿಸಿ, ಚಿಕ್ಕ ಕೆಲಸವಾದರೂ ಸರಿ ತುಂಬಾ ಎಚ್ಚರಿಕೆಯಿಂದ ಮಾಡಬೇಕು, ಇಲ್ಲದಿದ್ದರೆ ನಷ್ಟ ಉಂಟಾಗುವುದು. ಕೆಲಸದ ಸ್ಥಳದಲ್ಲಿ ಯಶಸ್ಸನ್ನು ಸಾಧಿಸಲು, ನೀವು ಹೆಚ್ಚು ಶ್ರಮಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ.ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ದುರ್ಬಲವಾಗಿರುತ್ತದೆ
ವೃಷಭ ರಾಶಿ: ನೀವು ಸಮಸ್ಯೆಯನ್ನು ಎದುರಿಸುವ ಪ್ರಯತ್ನ ಮಾಡುತ್ತೀರಿ. ಆರೋಗ್ಯ ಸಮಸ್ಯೆ ಕಮಡು ಬರುವುದು, ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ಕೆಲಸದ ಹೊರೆ ಕಡಿಮೆ ಇರಲಿದೆ. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ಅರೋಗ್ಯದ ಬಗ್ಗೆ ಹೇಳುವುದಾದರೆ ನಿದ್ರಾಹೀನತೆಯ ಸಮಸ್ಯೆವಿರಬಹುದು.
ಮಿಥುನ ರಾಶಿ:ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳು ವೀಸಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಈ ಸಮಸ್ಯೆ ಬಗೆಹರಿಯಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಬಹುದು. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ. ಕೆಲಸ ಬದಲಾವಣೆಯ ಬಗ್ಗೆ ಆಲೋಚಿಸುತ್ತಿದ್ದರೆ ಈ ಅವಧಿ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕರ್ಕ ರಾಶಿ: ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಯಾವುದೇ ಪ್ರಮುಖ ಕೆಲಸವು ಅಪೂರ್ಣವಾಗಿದ್ದರೆ ಅದನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಜನರಿಗೆ ದಿನವು ಲಾಭದಾಯಕವಾಗಿರುತ್ತದೆ. ಸಂಬಂಧಗಳಲ್ಲಿ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ:ವೃತ್ತಿಪರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳಿರಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ತಂದೆಯ ಆರೋಗ್ಯ ಸುಧಾರಿಸಲಿದೆ. ಕೆಲವು ದಿನಗಳವರೆಗೆ ನಿಮ್ಮ ಆರೋಗ್ಯವು ಸರಿಯಾಗಿಲ್ಲದಿದ್ದರೆ ನೀವು ವೈದ್ಯರನ್ನು ಸಂಪರ್ಕಿಸಬೇಕು.
ಕನ್ಯಾ ರಾಶಿ: ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದವಿದ್ದರೆ ಅದು ಬಗೆಹರಿಯಲಿದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ನೀವು ಎಚ್ಚರಿಕೆಯಿಂದ ಯೋಚಿಸಬೇಕು. ತಂದೆಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಲ್ಲ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಕೆಲಸ ಮಾಡಿ. ಮನೆಯಲ್ಲಿ ಯಾವುದೇ ವಿವಾದವಿದ್ದರೆ ಅದು ಬಗೆಹರಿಯುವ ಸಾಧ್ಯತೆಯಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ತುಲಾ ರಾಶಿ:ಆರ್ಥಿಕವಾಗಿ ಈ ದಿನ ಉತ್ತಮವಲ್ಲ. ಕೆಲಸದ ಸ್ಥಳದಲ್ಲಿ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಆರ್ಥಿಕ ಸಮಸ್ಯೆ ನಿಮ್ಮ ಚಿಂತೆ ಹೆಚ್ಚಿಸಲಿದೆ, ಕೆಲಸ ಕಾರ್ಯದಲ್ಲಿ ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ: ದಿನದ ಆರಂಭ ಧನಾತ್ಮಕವಾಗಿರುತ್ತದೆ. ಬಾಕಿಯಿರುವ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಸಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಧನು ರಾಶಿ:ಈ ದಿನ ನಿಮಗೆ ಧನಾತ್ಮಕವಾಗಿರಲಿದೆ, ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದಾಯ ಹೆಚ್ಚಾಗುವುದು, ಕೆಲಸ ಹುಡುಕುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಗಲಿದೆ.
ವೈವಾಹಿಕ ಜೀವನದಲ್ಲಿ ಯಾವುದೇ ಸಮಸ್ಯೆಯಿದ್ದರೆ ಶಾಂತವಾಗಿ ಬಗೆಹರಿಸಲು ಪ್ರಯತ್ನಿಸಬೇಕು. ಅರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಿ.
ಮಕರ ರಾಶಿ: ಯಾವುದೇ ಕೆಲಸಕ್ಕೆ ಸಂಬಂಧಿಸಿದ ಚಿಂತೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸದ ಕಡೆಗೆ ಗಮನಹರಿಸಿ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯವು ಹದಗೆಡಬಹುದು. ಕೋಪವನ್ನು ನಿಯಂತ್ರಿಸಿದರೆ ಜಗಳ ತಪ್ಪಿಸಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ: ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಾಗಾಗಿ ನೀವು ತುಂಬಾ ದಿನದಿಂದ ಖರೀದಿಸಬೇಕಾಗಿದ್ದ ವಸ್ತು ಖರೀದಿಸಲು ಈ ಅವಧಿ ಮಂಗಳಕರವಾಗಿದೆ. ನಿರುದ್ಯೋಗಿಗಳು ಉದ್ಯೋಗ ಪಡೆಯಬಹುದು. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ನ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು ಹೆಚ್ಚು ಗಮನಹರಿಸಿ.
ಮೀನ ರಾಶಿ: ಈ ದಿನ ನಿಮಗೆ ಉತ್ತಮವಾಗಿರಲಿದೆ. ಸಂಗಾತಿ ಜೊತೆಗೆ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆಯಿದೆ, ವೃತ್ತಿಯಲ್ಲಿ ಬದಲಾವಣೆಯಾಗಬಹುದು. ವೈವಾಹಿಕ ಜೀವನದಲ್ಲಿ ಹೆಚ್ಚು ಗಮನ ಕೊಡಿ. ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.