ಮೇಷ ರಾಶಿ : ಆರ್ಥಿಕ ಉಳಿತಾಯವನ್ನು ಅನ್ಯರಿಂದ ಕೇಳಿ ಪಡೆಯುವುದು ಉಚಿತ. ಪ್ರೀತಿಪಾತ್ರರ ಜೊತೆ ಇಂದು ವಿಹಾರ ಮಾಡುವಿರಿ. ನಿಮ್ಮ ಮಾತುಗಳೇ ನಿಮಗೆ ತಿರುಗುಬಾಣವಾಗಿ ಬರಬಹುದು. ನೀವು ಇಂದು ವಾಹನಕ್ಕೆ ಸಂಬಂಧಿಸಿದಂತೆ ಹಣವನ್ನು ವ್ಯಯಿಸಬೇಕಾಗಬಹುದು. ಯಾರಾದರೂ ನಿಮಗೆ ಇಂದು ಪ್ರೇರಣೆ ಆಗಬಹುದು. ನಿಮ್ಮ ಬಗ್ಗೆ ಬಂಧುಗಳು ಆಡಿಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಸರಿಯಾದ ದೃಷ್ಟಿಯನ್ನು ಇಟ್ಟುಕೊಳ್ಳುವರಿದ್ದಾರೆ. ಸ್ಥಾನಕ್ಕೆ ಯೋಗ್ಯವಾದ ಕಾರ್ಯವನ್ನು ಮಾಡಿ. ನಿಮಗೆ ಇಂದು ಬಹಳ ಕಾರ್ಯದ ಒತ್ತಡ ಇದ್ದರೂ ನೀವು ನಿಮ್ಮವರಿಗೆ ಸಮಯವನ್ನು ಕೊಡುವಿರಿ. ಸಂಗಾತಿಯ ಸಂಪೂರ್ಣ ಬೆಂಬಲವು ನಿಮಗೆ ಇರಲಿದೆ. ಫಲ ಸಿಗವವರೆಗೂ ನಿಮ್ಮ ಛಲವನ್ನು ಬಿಡಲಾರಿರಿ. ರಾಜಕಾರಣದ ಸ್ಪರ್ಶದಿಂದ ನಿಮ್ಮ ವ್ಯವಹಾರಕ್ಕೆ ಹೊಸ ದಿಕ್ಕನ್ನು ಸಿಗಬಹುದು. ಹಳೆಯ ವಸ್ತುಗಳನ್ನು ಹೊಸದಾಗಿ ಮಾಡಿಕೊಂಡು ಉಪಯೋಗಿಸುವಿರಿ.
ವೃಷಭ ರಾಶಿ : ನಿಮ್ಮದಲ್ಲದ ತಪ್ಪಿಗೂ ನೀವು ಕ್ಷಮೆಯನ್ನು ಕೇಳಬೇಕಾಗುವುದು. ಬರಬೇಕಾದ ಹಳೆಯ ಬಾಕಿಗಳು ಇಂದು ಬಂದು ಸೇರಲಿದೆ. ಸಂತೋಷ ಪಡಲು ನೀವು ನಿಮ್ಮದೇ ಮಾರ್ಗವನ್ನು ಕಂಡುಕೊಳ್ಳುವಿರಿ. ನೋವನ್ನು ಸ್ವಲ್ಪ ಕಾಲ ಮರೆಯುವಿರಿ. ಅನವಶ್ಯಕ ವಿಚಾರಕ್ಕೆ ನೀವು ಸಮಯವನ್ನು ಕೊಡುವಿರಿ. ತಂದೆಯಿಂದ ಬೈಗುಳ ಪಡೆಯಬಹುದು. ಯಾರನ್ನೂ ಒತ್ತಾಯ ಪೂರ್ವಕವಾಗಿ ತುಂಬ ದಿನದ ಆಸ್ತಿಯ ವಿವಾದವು ಇಂದು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ಸಹಾಯವನ್ನು ಪಡೆಯುವುದೂ ನಿಮಗೆ ಹಿಂಸೆಯಂತೆ ಆಗುವುದು. ನಿಮ್ಮನ್ನು ಕಂಡು ಅವಮಾನಿಸುವವರಿಗೆ ತಕ್ಕ ಉತ್ತರವನ್ನು ಕೊಡುವಿರಿ. ಪತ್ನಿಯ ಸಹಾಯ ನಿಮಗೆ ಸಿಗಲಿದೆ. ವ್ಯಾಪಾರ ವಲಯದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ನೌಕರರ ನಿರ್ಲಕ್ಷ್ಯದಿಂದ ಆಗುವ ಹೊಣೆಯನ್ನೂ ಹೊರಬೇಕಾಗುವುದು. ಶತ್ರುಗಳನ್ನು ನಿರ್ಲಕ್ಷಿಸಿ ಕಾರ್ಯವನ್ನು ಮಾಡುವಿರಿ. ನೀವು ಇನ್ನೊಬ್ಬರಿಗೆ ಹೊರೆಯಾಗದಂತೆ ಇರಿ.
ಮಿಥುನ ರಾಶಿ : ಮೇಲಧಿಕಾರಿಗಳ ಜೊತೆ ಮನಸ್ತಾಪ ಬರಬಹುದು. ಇನ್ನೊಬ್ಬರ ಮಾತನ್ನು ಪೂರ್ಣವಾಗಿ ನಂಬಿ ನಿಮ್ಮವರನ್ನು ಕಳೆದುಕೊಳ್ಳಲಿದ್ದೀರಿ. ನಿಮಗೆ ಇಂದು ಮಕ್ಕಳ ಕಡೆಯಿಂದ ಸಮಸ್ಯೆಗಳು ಬರುವ ಸಾಧ್ಯತೆ ಇದೆ. ಮನಸ್ಸಿನ ತೊಳಲಾಟದಿಂದ ನಿಮಗೆ ಕಷ್ಟವಾಗಬಹುದು. ಏಕಾಗ್ರವಾಗಿ ಕೆಲಸ ಮಾಡಲಾಗದು. ನಿಮ್ಮ ಗಮನಸೆಳೆದು ವಂಚಿಸುವ ಕೆಲಸವು ನಡೆಯಬಹುದು. ಜಾಗರೂಕತೆಯಿಂದ ಇರಿ. ಸಣ್ಣ ಆದಾಯವನ್ನು ನೀವು ಇಂದು ಪಡೆಯಬಹುದು. ಪ್ರವಾಸ ಮಾಡುವ ಮನಸ್ಸಾಗಲಿದೆ. ಲಾಭವಿದೆ ಎಂದು ಗೊತ್ತಿಲ್ಲದ ಕೆಲಸಕ್ಕೆ ಕೈ ಹಾಕಿ ಸುಟ್ಟುಕೊಳ್ಳುವಿರಿ. ಎಲ್ಲದರಲ್ಲಿಯೂ ಗೆಲ್ಲುವ ನಿರೀಕ್ಷೆ ಬೇಡ. ಸಾವಧಾನತೆ ನಿಮಗೆ ವರದಾನವಾಗಿದೆ. ಉಪಕರಣವನ್ನು ನೀವು ಸದುಪಯೋಗ ಮಾಡಿಕೊಳ್ಳುವಿರಿ. ನಿಮ್ಮ ಮಾತು ಕೋಪವನ್ನು ತರಿಸಬಹುದು. ನಿಮ್ಮಲ್ಲಿರುವ ನ್ಯೂನತೆಗಳನ್ನು ನೀವೇ ತಿಳಿದು ಸರಿಪಡಿಸಿಕೊಳ್ಳಿ. ನೀವು ಇಂದು ಇನ್ನೊಬ್ಬರು ಹೇಳುವ ತನಕ ಕಾರ್ಯವನ್ನು ಮಾಡಲು ಕಾಯುವುದು ಬೇಡ.
ಕರ್ಕ ರಾಶಿ : ವೃತ್ತಿಯಲ್ಲಿ ಮೇಲೇರಿದ ಅನುಭವ ಆಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದ್ದನ್ನು ತುರ್ತಾಗಿ ಮಾಡುವಿರಿ. ನೀವು ಬದಲಿಸಿಕೊಂಡ ಜೀವನಶೈಲಿಯ ಬಗ್ಗೆ ಕೆಲಸವರು ಆಡಿಕೊಳ್ಳಬಹುದು. ದಾಂಪತ್ಯದಲ್ಲಿ ವಿರಸದ ಮನೋಭಾವವು ಮುಂದುವರಿಯಬಹುದು. ಆತುರದಿಂದ ಕಾರ್ಯಗಳು ಹಾಳಾಗುವುದು. ಚಾಡಿಯಿಂದ ಯಾರನ್ನಾದರೂ ಹಾಳು ಮಾಡುವ ಕೆಲಸವು ನಿಮ್ಮಿಂದ ಆದೀತು. ಇಂದು ನೀವು ಶುಭ ವಾರ್ತೆಯನ್ನು ನಿರೀಕ್ಷಿಸಬಹುದು. ಇಂದು ನಿಮ್ಮ ಮನಸ್ಸು ಬಹಳ ಸಂತೋಷದಿಂದ ಇರಲಿದೆ. ಸಹೋದರಿಯು ನಿಮಗೆ ಧನಸಹಾಯವನ್ನು ಮಾಡುವರು. ಆರೋಗ್ಯದ ಸಮಸ್ಯೆಗಳನ್ನು ಸರಿಯಾದ ವೈದ್ಯರ ಮೂಲಕ ಸರಿಮಾಡಿಕೊಳ್ಳುವುದು ಉತ್ತಮ. ಸಜ್ಜನರ ಸಹವಾಸ ಅಕಸ್ಮಾತ್ ಆಗಿ ಸಿಗುವುದು. ಯಾವುದೇ ರೀತಿಯ ವ್ಯವಹಾರಕ್ಕೆ ನಿಮ್ಮ ಕೆಲಸದ ಗುಣಮಟ್ಟಕ್ಕೆ ಹೆಚ್ಚಿನ ಗಮನ ಬೇಕಾಗುತ್ತದೆ. ಸಾಲದಲ್ಲಿ ವ್ಯವಹಾರವನ್ನು ಮಾಡುವ ಯೋಚನೆ ಬೇಡ.
ಸಿಂಹ ರಾಶಿ : ಸಂಬಂಧಗಳನ್ನು ನಿರ್ವಹಿಸುವುದು ಕಷ್ಟವಾದೀತು. ಕೆಲಸಗಳಲ್ಲಿ ಹಿನ್ನಡೆಯಾಗಿ ಮೇಲಧಿಕಾರಿಗಳಿಂದ ಸೂಚನೆ ಬರಬಹುದು. ಕಛೇರಿಯ ಕೆಲಸದಲ್ಲಿ ವ್ಯತ್ಯಾಸವಾದ ಕಾರಣ ಕಿರಿಕಿರಿಯಿಂದ ಕೋಪ ಉಂಟಾಗಬಹುದು. ಭೂ ವ್ಯವಹಾರದ ಕಾರಣದಿಂದ ಮನಸ್ಸು ವಿಚಲಿತ ಆಗಲಿದೆ. ರಾಜಕೀಯಕ್ಕೆ ಹೋಗಲು ನಿಮಗೆ ಬೆಂಬಲವು ಸಿಗಲಿದೆ. ನೀವೂ ಬಹಳ ಉತ್ಸುಕರಾಗಿರುವಿರಿ. ವ್ಯಾಪಾರವು ನಿಮಗೆ ಲಾಭಾಂಶವನ್ನು ಕಡಿಮೆ ಮಾಡೀತು. ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಆಲೋಚನೆಯನ್ನು ಮಾಡುವಿರಿ. ನಿಮಗೆ ಕುಟುಂಬದ ಬೆಂಬಲವಿದ್ದು, ಧೈರ್ಯವಾಗಿ ಮುನ್ನಡೆಯುವಿರಿ. ಕಳ್ಳತನ ಆರೋಪ ಬರಬಹುದು. ವ್ಯವಹಾರದಲ್ಲಿ ನೀವು ತೆಗೆದುಕೊಳ್ಳುವ ತ್ವರಿತ ನಿರ್ಧಾರಗಳು ಸಕಾರಾತ್ಮಕವಾಗಿರುತ್ತವೆ. ಕಳೆದ ಸಮಯವನ್ನು ಚಿಂತಿಸುವಿರಿ. ಮನೆಯಿಂದ ಹೊರಗೆ ಇರಬೇಕಾಗುವುದು.
ಕನ್ಯಾ ರಾಶಿ : ಒಳಗೊಂದು ಹೊರಗೊಂದು ಸ್ವಭಾವವನ್ನು ತೋರಿಸುವುದು ಬೇಡ. ವೇಗವಾಗಿ ಸಾಲವನ್ನು ಮುಗಿಸಲು ನೀವು ಪ್ರಯತ್ನಿಸಬೇಕಾದೀತು. ಆಲಸ್ಯದಿಂದ ಹೊರಬಂದು ಆ ಕುರಿತು ಆಲೋಚಿಸಿ. ಅದೃಷ್ಟವನ್ನು ನಂಬಿ ಕುಳಿತುಕೊಳ್ಳುವುದು ಬೇಡ. ನಿಮಗಾಗದ ಕಾರ್ಯವನ್ನು ನೇರವಾಗಿ ಹೇಳುವಿರಿ. ಆದರೆ ನಿಮ್ಮ ಪ್ರಯತ್ನವೂ ಇರಲಿ. ಉದ್ಯೋಗದ ಕಾರಣದಿಂದ ನೀವು ಪ್ರಯಾಣವನ್ನು ಮಾಡಬೇಕಾಗಿಬರಬಹುದು. ತುಂಬಾ ದಿನಗಳಿಂದ ನಡೆಯುತ್ತಿರುವ ಕುಟುಂಬದ ಶೀತಲ ಕಲಹವು ನಿಮಗೆ ಬೇಸರ ತರುತ್ತದೆ. ಅದನ್ನು ಮುಗಿಸಲು ನಾನಾ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ. ನಿಮ್ಮ ಆಲೋಚನೆಗಳ ಬಗ್ಗೆ ಯೋಚಿಸುವುದು ಕೆಲವು ಪರಿಣಾಮಗಳನ್ನು ಉಂಟುಮಾಡಬಹುದು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳು ಹೆಚ್ಚು ಸಮಯ ಕಳೆಯಬಹುದು. ಅಧ್ಯಯನವನ್ನು ನಿರ್ಲಕ್ಷಿಸಬಹುದು. ಇಂದು ನೌಕರರಿಂದ ಕೆಲವು ಅಡಚಣೆಗಳೂ ಇರಬಹುದು.
ತುಲಾ ರಾಶಿ : ಅನುಭವಿಗಳ ಮುಂದೆ ಮೌನವಾಗಿರುವುದು ಲೇಸು. ನೀವು ಇಂದು ಏನನ್ನೋ ಮಾಡಲು ಹೋಗಿ ಮತ್ತೇನೋ ಆಗಬಹುದು. ಮಕ್ಕಳಿಂದಾಗಿ ಆರ್ಥಿಕನಷ್ಟವನ್ನು ಕಾಣಬೇಕಾಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ದಾಂಪತ್ಯದಲ್ಲಿ ಬಿರಕು ಬರುವ ಸಾಧ್ಯತೆ ಇದೆ. ಆಪ್ತರ ಮಾತಿನಿಂದ ಮನಸ್ಸಿಗೆ ಘಾಸಿಯಾಗಬಹುದು. ಸಂಬಂಧವನ್ನು ಉಳಿಸಿಕೊಳ್ಳಲು ನೀವು ಹಣವನ್ನು ವ್ಯಯಿಸಬೇಕಾಗಬಹುದು. ಸ್ವ ಉದ್ಯೋಗವನ್ನು ನಡೆಸುತ್ತಿದ್ದರೆ, ಕೆಲಸಕ್ಕೆ ಕೆಲವರನ್ನು ತೆಗೆದುಕೊಳ್ಳುವಿರಿ. ನಿಮಗೆ ಪಾಪಪ್ರಜ್ಞೆ ಇಂದು ಕಾಡಬಹುದು. ಅದಕ್ಕೋಸ್ಕರ ಪಶ್ಚಾತ್ತಾಪ ಪಡಬೇಕಾದೀತು. ಸ್ನೇಹಿತರು ನಿಮ್ಮ ಜೊತೆ ಎಂದಿನಂತೆ ಇಲ್ಲವೆಂದು ಬುದ್ಧಿಯು ಊಹಿಸುತ್ತದೆ. ಮಕ್ಕಳ ಕಾರಣದಿಂದ ಅಪಮಾನವಾಗುವ ಸಾಧ್ಯತೆ ಇದೆ. ನಿಮಗೆ ಎದುರಾಗುವ ಸಂಕಟಗಳ ಬಗ್ಗೆ ಗಮನವಿರಲಿ. ಸೌಹಾರ್ದತೆಯ ಚರ್ಚೆಯಿಂದ ಒಳ್ಳೆಯದಾಗುವುದು. ವೈಯಕ್ತಿಕ ಸಮಸ್ಯೆಗಳನ್ನು ವ್ಯವಹಾರಕ್ಕೆ ತಂದುಕೊಳ್ಳುವುದು ಬೇಡ.
ವೃಶ್ಚಿಕ ರಾಶಿ : ಇಂದು ನಿಮ್ಮ ಬಗ್ಗೆ ಕಪೋಲಕಲ್ಪಿತ ಸುದ್ದಿಗಳು ಹರಡಬಹುದು. ಸಂತರಿಗೆ ಸಮಾನವಾದ ವ್ಯಕ್ತಿಗಳಿಂದ ನಿಮಗೆ ಸಾಂತ್ವನ ಸಿಗಲಿದೆ. ನಿಮಗೆ ಸೌಕರ್ಯಗಳು ಅಧಿಕವಾಗಿ ಬೇಕು ಎನಿಸಬಹುದು. ಸ್ಥಾನಭ್ರಷ್ಟವಾಗುವ ಭಯವು ನಿಮಗೆ ಕಾಡಬಹುದು. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಕೆಲವು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಆರೋಗ್ಯದ ವ್ಯತ್ಯಾಸದಿಂದ ಮನೆಯಲ್ಲಿ ಆತಂಕಪಡಬಹುದು. ಯಾರನ್ನೂ ಅಲ್ಪವೆಂದು ಭಾವಿಸಿ, ಅವರ ಬಗ್ಗೆ ಹಗುರಾಗಿ ಮಾತನಾಡುವುದು ಬೇಡ. ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಕೇಂದ್ರೀಕರಿಸಲಾರರು. ಖರೀದಿಸುವಾಗ ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳಲು ಮರೆಯದಿರಿ. ಸರ್ಕಾರಿ ನೌಕರರು ಹೆಚ್ಚಿನ ಕೆಲಸದ ಕಾರಣದಿಂದ ಇಂದು ಹೆಚ್ಚಿನ ಸಮಯವನ್ನು ಮಾಡಬೇಕಾಗುವುದು. ಪ್ರೇಮ ಸಂಬಂಧದ ಕೋಪದಿಂದ ನೀವು ಭಾವನಾತ್ಮಕ ದೂರವಾಗುವಿರಿ. ಸ್ವಂತ ವಾಹನದಲ್ಲಿ ಪ್ರಯಾಣವನ್ನು ಸಂತೋಷದಿಂದ ಮಾಡುವಿರಿ.
ಧನು ರಾಶಿ : ಮಾನಸಿಕ ಅಸ್ಥಿರತೆಯಿಂದ ಜೊತೆಗಾರರಿಗೆ ಕಷ್ಟವಾಗಲಿದೆ. ಇಂದು ನಿಮ್ಮ ಮನೆಯ ಒತ್ತಡದದ ಕಾರಣ ಯಾವ ಕಾರ್ಯವನ್ನೂ ಪೂರ್ಣಗೊಳಿಸಲಾಗದು. ಹಣವನ್ನು ಸಂಪೂರ್ಣವಾಗಿ ಇತರೇತರ ಕಾರ್ಯಗಳಿಗೆ ಖರ್ಚು ಮಾಡಿ ತುರ್ತಿಗೆ ಹಣವಿಲ್ಲದಂತೆ ಮಾಡಿಕೊಳ್ಳುವಿರಿ. ಎಲ್ಲಿಗಾದರೂ ಹೋಗುವ ಸ್ವಾತಂತ್ರ್ಯ ನಿಮಗೆ ಇಂದು ಸಿಗಬಹುದು. ಬುದ್ಧಿವಂತಿಕೆಯಿಂದ ನೀವು ಹಣದ ವಂಚನೆಯಿಂದ ತಪ್ಪಿಸಿಕೊಳ್ಳುವಿರಿ. ದಿನ ನಿತ್ಯದ ಜೀವನವು ಏರುಪೇರಾಗಬಹುದು. ಅವಿವಾಹಿತರು ವಿವಾಹಕ್ಕೆ ಸಂಬಂಧಿಸಿದ ಸುದ್ದಿಯು ಬರಬಹುದು. ವೃತ್ತಿಯಲ್ಲಿ ಮಹಿಳೆಯರ ಪಾತ್ರ ಹಿರಿದಾಗಿ ಕಾಣುವುದು. ಆದರೆ ಉತ್ತಮ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪ್ರಯತ್ನವೂ ಅಗತ್ಯ. ವಿದ್ಯಾರ್ಥಿಗಳು ಅಧ್ಯಯನದಿಂದ ದೂರವಾಗುತ್ತಾರೆ. ವ್ಯಾಪಾರವನ್ನು ಹೆಚ್ಚಿಸಲು ಸೂಕ್ತ ವಿಧಾನಗಳನ್ನು ಅಳವಡಿಸಿಕೊಳ್ಳಿ. ನಿಮ್ಮ ಆದಾಯದ ಬಗ್ಗೆ ಗೌಪ್ಯತೆ ಇರಲಿ.
ಮಕರ ರಾಶಿ : ದಾಂಪತ್ಯದಲ್ಲಿ ಸಂತೋಷವಿರಲು ಹೊಸತನ ಬೇಕಾದೀತು. ಬೇಡದ್ದನ್ನೂ ಮನಸ್ಸಿನಲ್ಲಿ ಹಾಕಿಕೊಂಡು ಸಂಕಟಪಡುವಿರಿ. ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಇಬ್ಬರಿಗೂ ಸಂತೋಷವಾಗಲಿದೆ. ನೀವಂದುಕೊಂಡಿದ್ದೇ ಸತ್ಯ ಎನ್ನುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಂಡಿದ್ದರೆ ಅದರಿಂದ ಹೊರಬರುವುದು ಒಳ್ಳೆಯದು. ವಿದ್ಯಾಭ್ಯಾಸವನ್ನು ತಪ್ಪಿಸಿಕೊಳ್ಳಲು ಏನಾದರೂ ಕಾರಣ ಸಿಗುವುದು. ಸಂಬಂಧಗಳು ಸಡಿಲವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯು ನಿಮ್ಮದೇ ಆಗಿರುತ್ತದೆ. ಸಂಗಾತಿಯ ಅನಾರೋಗ್ಯದ ಬಗ್ಗೆ ಅವಶ್ಯವಾಗುವುದು. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವುದು ನಿಮಗೆ ಖುಷಿಯ ಸಂಗತಿಯಾಗಿದೆ. ಇಂದಿನ ನಿಮ್ಮ ಪ್ರಯಾಣದಿಂದ ಕಷ್ಟವಾಗಬಹುದು. ಕಠಿಣ ಪರಿಶ್ರಮದ ಹೊರತಾಗಿ ಸರಿಯಾದ ಫಲಿತಾಂಶವನ್ನು ಸಾಧಿಸಲಾಗುವುದಿಲ್ಲ. ಸಂಶೋಧನೆಯ ಚಟುವಟಿಕೆಗಳಲ್ಲಿ ಯಶಸ್ಸಿದೆ. ಪುಣ್ಯಸ್ಥಳದ ದರ್ಶನದಿಂದ ಪುಣ್ಯಪ್ರಾಪ್ತಿಯಾಗಲಿದೆ.
ಕುಂಭ ರಾಶಿ : ಒತ್ತಡದಿಂದ ಕಾರ್ಯವನ್ನು ಮಾಡುವುದು ನಿಮಗೆ ಅಭ್ಯಾಸವಾಗಿದೆ. ಇಂದು ನೀವು ಭವಿಷ್ಯಕ್ಕಾಗಿ ಆರ್ಥಿಕತೆಯ ಬಗ್ಗೆ ಅಧಿಕ ಆಲೋಚನೆ ಮಾಡುವ ಸನ್ನಿವೇಶ ಬರಲಿದೆ. ನಿಮ್ಮ ಅಂತಸ್ಸತ್ತ್ವವೇ ಎಲ್ಲ ಕಾರ್ಯಗಳನ್ನು ಖುಷಿಯಿಂದ ಮಾಡಲು ಸಹಕಾರಿಯಾಗುವುದು. ಬಹಳ ದಿನಗಳಿಂದ ನಿಮ್ಮ ಆರೋಗ್ಯವು ಹಳಿ ತಪ್ಪಿದ್ದರೂ ನೀವು ನಿರ್ಲಕ್ಷ್ಯ ತೋರಿಸುತ್ತಿರುವುದು ಒಳ್ಳೆಯದಲ್ಲ. ಆತುರದಿಂದ ನಿಮ್ಮವರಿಗೆ ಕಷ್ಟಕೊಡುವಿರಿ. ಬೆಳಗಿನ ಉತ್ಸಾಹವು ಸಂಜೆಯವರೆಗೂ ಇರಲಿದೆ. ಅರ್ಥವಿಲ್ಲದ ಚರ್ಚೆಗಳಲ್ಲಿ ಸಮಯವನ್ನು ನಷ್ಟ ಮಾಡಿಕೊಳ್ಳುವುದು ಬೇಡ. ನಿಮ್ಮ ಮನಸ್ಸನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದಾದರೂ ನಿರ್ಧಾರವನ್ನು ತೆಗೆದುಕೊಳ್ಳುವಾಗ, ಉತ್ತಮ ಅನುಭವಿ ವ್ಯಕ್ತಿಯನ್ನು ಸಂಪರ್ಕಿಸಿ. ಇಂದು ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅತಿಯಾಗಿ ನಂಬಬೇಡಿ. ಕೃಷಿಯ ಉತ್ಪನ್ನದಿಂದ ಹೆಚ್ಚು ಲಾಭವನ್ನು ಅಪೇಕ್ಷಿಸುವಿರಿ.
ಮೀನ ರಾಶಿ : ಇಂದು ನಿಮ್ಮ ಕುಟುಂಬವು ಸಂತೋಷವಾಗಿ ಇರುವುದನ್ನು ಕಣ್ತುಂಬಿಕೊಳ್ಳುವಿರಿ. ಕುಂಟು ನೆಪವನ್ನು ಹೇಳಿ ಇಂದಿನ ಸುತ್ತಾಟವನ್ನು ತಪ್ಪಿಸಿಕೊಳ್ಳುವಿರಿ. ತಿಳಿವಳಿಕೆ ಇಲ್ಲದವರ ನಿಮ್ಮ ವ್ಯವಹಾರಗಳನ್ನು ಹೇಳಬೇಡಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ನಿಮಗೆ ನಷ್ಟವಾಗಬಹುದು. ಇಂದು ಸ್ವಲ್ಪ ದೇಹಕ್ಕೂ ಮನಸ್ಸಿಗೂ ವಿಶ್ರಾಂತಿಯನ್ನು ನೀಡಿದರೆ ಒಳ್ಳೆಯದು. ಆಗಬೇಕಾಗಿರುವ ಕೆಲಸದ ಬಗ್ಗೆ ಗಮನ ಹರಿಸಿ ಮುಗಿಸುವುದು ಒಳ್ಳೆಯದು. ಜಾಡ್ಯವು ಅತಿಯಾದಂತೆ ತೋರುವುದು. ಅತಿಯಾದ ಸಲುಗೆಯು ದುರುಪಯೋಗವಾದೀತು. ನಿಮ್ಮನ್ನು ನೆಚ್ಚುವವರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ. ದೂರಪ್ರಯಾಣಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಿ. ವ್ಯಾಪಾರದಲ್ಲಿ ಅಜಾಗರೂಕತೆ ಬೇಡ.