ಚಾಮರಾಜನಗರ:- ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ್ದ ವ್ಯಕ್ತಿಗೆಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 2 ವರ್ಷಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಕೊಳ್ಳೇಗಾಲದ ಭೀಮನಗರ ನಿವಾಸಿ ಶಿವಕುಮಾರ್(37) ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತ ಬಾಲಕಿಯನ್ನು ಹಿಡಿದು ಎಳೆದೊಯ್ದು ಮಾನಭಂಗ ಮಾಡುವಉದ್ದೇಶದಿಂದ ಲೈಂಗಿಕ ದೌರ್ಜನ್ಯಎಸಗಿದ್ದ. ಜೊತೆಗೆ, ಇದನ್ನು ಪ್ರಶ್ನಿಸಿದ ಬಾಲಕಿಯ ಪಾಲಕರಿಗೂ ಕೊಲೆ ಬೆದರಿಕೆ ಹಾಕಿದ್ದನು.
ಘಟನೆ ಸಂಬಂಧ 2021 ರಜನವರಿ 1 ರಂದು ಕೊಳ್ಳೇಗಾಲ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು. ಶಿವಕುಮಾರ್ ವಿರುದ್ಧಎಲ್ಲಾ ಆರೋಪಗಳು ಸಾಬೀತಾದ್ದರಿಂದ ನ್ಯಾ.ನಿಶಾರಾಣಿಅಪರಾಧಿಗೆ 2 ವರ್ಷ ಶಿಕ್ಷೆ ವಿಧಿಸಿ,ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 2 ಲಕ್ಷರೂ. ಹಣವನ್ನು ಪರಿಹಾರರೂಪದಲ್ಲಿಕೊಡಬೇಕೆಂದು ಸೂಚಿಸಿದ್ದಾರೆ.
ಸರ್ಕಾರದ ಪರವಾಗಿಕೆ.ಯೋಗೇಶ್ ವಾದ ಮಂಡಿಸಿದ್ದರು.