ಮೈಸೂರು:- ಆ.30 ರಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ “ಗೃಹಲಕ್ಷ್ಮೀ” ಯೋಜನೆಗೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಈಗಾಗಲೇ ಶೇ.80 ರಷ್ಟು ನೋಂದಣಿ ಪ್ರಕ್ರಿಯೆ ಮುಗಿದಿದ್ದು,ನೋಂಣಿಗೆ ಸಮಯ ನಿಗದಿ ಮಾಡಿರುವುದಿಲ್ಲ ನೋಂದಣಿ ನಿರಂತರವಾಗಿರುತ್ತದೆ ಎಂದರು.ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಮಾತನಾಡಿ,ರಾಜ್ಯದ 130 ಲಕ್ಷ ಕುಟುಂಬಗಳು ಸ್ವಾವಲಂಬಿ ಜೀವನ ನಡೆಸಲು ಇದೊಂದು ಉತ್ತಮ ಯೋಜನೆಯಾಗಿದ್ದು, ಸ್ವಾತಂತ್ರ್ಯಾನಂತರದ ಬಹುದೊಡ್ಡ ಯೋಜನೆಯಾಗಿದೆ , ಮಹಿಳಾ ಸಶಸ್ತೀಕರಣದೊಂದಿಗೆ ಮಹಿಳೆಯರ ಆತ್ಮಗೌರವ ಹೆಚ್ಚಿಸುವ ಕಾರ್ಯಕ್ರಮವಾಗಿದೆ ಎಂದರು.ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದು ಅವರಿಗೆ ಸರಿಯಾದ ಊಟ, ಶೌಚಾಲಯ, ಬಸ್ ವ್ಯವಸ್ಥೆ, ಕುಡಿಯುವ ನೀರು ಸಮರ್ಪಕವಾಗಿರಲಿ ಎಂದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಡಿ. ರವಿಶಂಕರ್, ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್ , ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.