ಸಚಿವ ಸ್ಥಾನ ವಂಚಿತ ಪುಟ್ಟರಂಗಶೆಟ್ಟಿಗೆ ಉಪ ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿತ್ತು. ಇದೀಗ ಡೆಪುö್ಯಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ, ನಾನು ಶಾಸಕನಾಗಿಯೇ ಮುಂದುವರಿಯುತ್ತೇನೆAದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಉಪ್ಪಿನ ಮೋಳೆಯ ನಿವಾಸದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ
ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸುವುದು ಕಷ್ಟವಾಗಲಿದೆ. ಉಪ ಸ್ಪೀಕರ್ ಸ್ಥಾನ ಕಾರ್ಯಭಾರದ ಒತ್ತಡದಿಂದ ಕ್ಷೇತ್ರದ ಕೆಲಸ ಮಾಡಲು ಕಷ್ಟವಾಗುತ್ತೆ. ಡೆಪುö್ಯಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಕೈಗೆಟುಕುವುದಿಲ್ಲ. ಹಾಗಾಗಿ ಡೆಪುö್ಯಟಿ ಸ್ಪೀಕರ್ ಸ್ಥಾನ ಬೇಡ ಎಂಬುದು ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರ ಒತ್ತಾಯವಾಗಿದೆ ಎಂದರು.
ನಾನು ಉಪ್ಪಾರ ಸಮಾಜದ ಏಕೈಕ ಶಾಸಕನಾಗಿದ್ದೇನೆ. ಯಾವಾಗಲೂ ಜನರ ಜೊತೆ ಬೆರೆತು ಕೆಲಸ ಮಾಡುವವನು. ಉಪ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್ ಒತ್ತಾಯಿಸಿದ್ದರು. ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಕೈ ತಪ್ಪಿದೆ. ಕಾರಣ ಏನೆಂದು ಗೊತ್ತಿಲ್ಲವೆಂದು ಶಾಸಕ ಪುಟ್ಟರಂಗಶೆಟ್ಟಿ ಬೇಸರ ವ್ಯಕ್ತಪಡಿಸಿದರು.