ಬೆಂಗಳೂರು: ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡುಬAದಿದ್ದು, ತೀವ್ರ ನಿಗಾ ಘಟಕದಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಗುರುವಾರ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಿದ್ದಾರೆ. ಮೂರು ದಿನ ವಾರ್ಡ್ ನಲ್ಲಿ ವೈದ್ಯರು ನಿಗಾ ವಹಿಸಲಿದ್ದಾರೆ.
ನಿನ್ನೆಯಿಂದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಚ್ ಡಿಕೆ, ಇವಾಗ ವಾರ್ಡ್ ಗೆ ಶಿಫ್ಟ್ ಆದರೂ ಯಾರನ್ನು ಭೇಟಿ ಮಾಡದಂತೆ ಕುಮಾರಸ್ವಾಮಿ ಗೆ ವೈದರು ಸೂಚನೆ ನೀಡಿದ್ದಾರೆ.