ಮೈಸೂರು: ರಾಜ್ಯ ಸರ್ಕಾರ ಕಾಂತರಾಜ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಜಾರಿಗೆ ತರುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ಪ್ರತಿಭಟಿಸಿತು.
ನಗರದ ಎಫ್ ಟಿಎಸ್ ನ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟಿಸಿದ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಮುಸ್ಲಿಮರ ಮೀಸಲಾತಿ 2ಬಿ ಪ್ರಮಾಣವನ್ನು ಶೇ.8ಕ್ಕೆ ಏರಿಸಬೇಕೆಂದು ಒತ್ತಾಯಿಸಿದರು. ಎಸ್.ಡಿ.ಪಿ.ಐ. ಪಕ್ಷದ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್,
ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ,
ಮೈಸೂರು ಜಿಲ್ಲಾಧ್ಯಕ್ಷ ರಫತ್ ಖಾನ್, ರಾಜ್ಯ ಸಮಿತಿ ಸದಸ್ಯ ಅಬ್ದದ್ ಖಾನ್, ಮೌಲನ ನೂರುದ್ದೀನ್ , ಜಿಲ್ಲಾ ಉಪಾಧ್ಯಕ್ಷ ಹಾಗೂ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಸ್. ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಫಿವುಲ್ಲಾ, ಜಿಲ್ಲಾ ಸಮಿತಿ ಸದಸ್ಯ ಮನ್ಸೂರ್ ಅಹಮದ್
ಇನ್ನಿತರರು ಭಾಗವಹಿಸಿದ್ದರು.