ದಾವಣಗೆರೆ: ಪಂಜಾಬ್ ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ಕರ್ತವ್ಯದಲ್ಲಿದ್ದ ದಾವಣಗೆರೆ ಜಿಲ್ಲೆಯ ಮೂಲದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ ತಾಲೂಕಿನ ಹದಡಿ ನಾಗರಾಜು ಸಾವಿಗೆ ಶರಣಾದ ಯೋಧ ಎಂದು ಗುರುತಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಚಂಡೀಗಢದಲ್ಲಿರುವ ಪಂಜಾಜ್ ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ನಾಗರಾಜು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.
ಭಾನುವಾರ ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಾಗರಾಜ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಸ್ವಗ್ರಾಮ ಹದಡಿಗೆ ತರಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ