ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಶಾಂತಿ, ಸುವ್ಯವಸ್ಥೆಗೆ ಹೆಸರಾದ ನಗರವಾಗಿದ್ದು, ಮಹಿಷಾ ದಸರಾ ತಡೆಗೆ ಸಂಘರ್ಷಕ್ಕೂ ಸಿದ್ದ ಎನ್ನುವ ಪ್ರಚೋದನಾಕಾರಿ ಹೇಳಿಕೆ ಮೂಲಕ ಸಂಸದ ಪ್ರತಾಪಸಿಂಹ ಅವರು ನಗರದ ಶಾಂತಿ ಕದಡಲು ಯತ್ನಿಸುತ್ತಿದ್ದಾರೆಂದು ಕಾಂಗ್ರೆಸ್ ನಗರ ವಕ್ತಾರ ಎಸ್.ರಾಜೇಶ್ ಕಿಡಿಕಾರಿದರು.
ನಗರದ ಪತ್ರಕರ್ತರಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದ ಶಾಂತಿ ಸುವ್ಯವಸ್ಥೆ ಹದಗೆಡಲು ಪಿತೂರಿ ಮಾಡುತ್ತಿದ್ದರು. ಧರ್ಮ-ಧರ್ಮಗಳ ನಡುವೆ ಹಾಗೂ ಶೋಷಿತ ಸಮುದಾಯಗಳ ಮೇಲೆ ದಬ್ಬಾಳಿಕೆಯ ಪ್ರಚೋದನೆಯಾಗಿದೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ಭಾವನೆ, ಆಚರಣೆ, ಧಾರ್ಮಿಕ ಸ್ವಾತಂತ್ರ್ಯ ಇದೆ. ಈ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುವ ಪ್ರಯತ್ನ ಪ್ರತಾಪ್ ಸಿಂಹದವರದ್ದಾಗಿದೆ. ಈ ನಡೆ ಸಂವಿಧಾನ ವಿರೋಧಿಯಾಗಿದೆ. ಪ್ರತಾಪಸಿಂಹರವರನ್ನು ಈ ಕೂಡಲೇ ಬಂಧಿಸಬೇಕು ಎಂದು ಹೇಳಿದರು.