ಚಾಮರಾಜನಗರ:- ಪತ್ನಿಗೆ ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.
ಕುಮಾರ್ ಎಂಬಾತ ಹಲ್ಲೆ ಮಾಡಿದ್ದು, ಸುಧಾಮಣಿ ಎಂಬವರು ತೀವ್ರವಾಗಿ ಗಾಯಗೊಂಡು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕುಮಾರ್ ಬುಧವಾರ ತಡರಾತ್ರಿ ಪತ್ನಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದು ತಲೆ, ಬೆನ್ನು, ಕೈಗಳಿಗೆ ತೀವ್ರ ಪೆಟ್ಟು ಬಿದ್ದಿದೆ.
ಹಲ್ಲೆ ಮಾಡಿ ಮಲಗಿದ್ದ ಕುಮಾರನನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.
ಸದ್ಯ, ನಶೆಯಿಂದ ಇನ್ನೂ ಇಳಿಯದ ಪರಿಣಾಮ ಯಾವುದೇ ವಿಚಾರಣೆ ಇನ್ನೂ ನಡೆಸಿಲ್ಲ ಎಂದು ತಿಳಿದುಬಂದಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ತೆಪ್ಪ ಸವಾರನಿಗೆ ಹಲ್ಲೆ: ಮದ್ಯದ ನಶೆಯಲ್ಲಿದ್ದ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ಕೊಳ್ಳೇಗಾಲದ ಶಿವನಸಮುದ್ರದ ಕಾವೇರಿ ನದಿಯಲ್ಲಿ ನಡೆದಿದೆ. ಶಿವನಸಮುದ್ರದ ಭೈರನಾಯಕ ಎಂಬ ತೆಪ್ಪದ ಸವಾರ ಗಾಯಗೊಂಡಿದ್ದಾನೆ. ಕೊಳ್ಳೇಗಾಲದ ಶಿವನಸಮುದ್ರಕ್ಕೆ ಬಂದಿದ್ದ ಬೆಂಗಳೂರಿನ ಬನ್ನೇರುಘಟ್ಟ ಮೂಲದ ಯುವಕರ ಗುಂಪು ಕಾವೇರಿ ನದಿಯಲ್ಲಿ ಅಪಾಯಕಾರಿಯಾಗಿ ಆಟ ಆಡುತ್ತಿದ್ದದ್ದನ್ನು ಹೊಡೆದಿದ್ದಾರೆ. ಪ್ರಶ್ನಿಸಿದ್ದಕ್ಕೆ ಕಲ್ಲು, ಕೈಗಳಿಂದ ಸದ್ಯ, ಬೈರನಾಯಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದು ಗ್ರಾಮಾಂತರ ಠಾಣಾ ಕೊಳ್ಳೇಗಾಲ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.