ಬೆಂಗಳೂರು:- ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ನೂರಾರು ಮಾಂಸದ ಬಾಕ್ಸ್ಗಳನ್ನು ತುಂಬಿರುವ ವಾಹನವನ್ನು ತಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದಿಂದ ರಾಜ್ಯಕ್ಕೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದೆ. ಪುನೀತ್ ಕೆರೆಹಳ್ಳಿ ಅವರ ತಂಡದ ಕಾರ್ಯಕರ್ತರು ಮೆಜೆಸ್ಟಿಕ್ನಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಜೈಪುರ್ ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಮಾಂಸದ ನೂರಾರು ಬಾಕ್ಸ್ಗಳನ್ನು ಸರಬರಾಜು ಮಾಡಲಾಗಿದೆ. ಈ ಬಾಕ್ಸ್ಗಳಲ್ಲಿರೋದು ಕುರಿ ಮಾಂಸ ಅಥವಾ ಬೇರೆ ಮಾಂಸನಾ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತರು ರಾಜಸ್ಥಾನದಿಂದ ರಾಜ್ಯಕ್ಕೆ ನಾಯಿ ಮಾಂಸ ಸಾಗಾಟ ಮಾಡಿ ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ಗಳಿಗೆ ಮಾರುತ್ತಿದ್ದಾರೆ ಅನ್ನೋ ಆರೋಪ ಮಾಡಿದ್ದಾರೆ. ನೂರಾರು ಮಾಂಸದ ಬಾಕ್ಸ್ಗಳನ್ನು ಸಾಗಿಸುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ಪರಿಶೀಲನೆ ನಡೆಸಲು ಪಟ್ಟು ಹಿಡಿದಿದ್ದಾರೆ.
ಮಾಂಸ ಸಾಗಾಟ ಮಾಡುತ್ತಿರೋ ವ್ಯಾಪಾರಿ ಅಬ್ದುಲ್ ರಜಾಕ್ ಅವರು ಕಾರ್ಯಕರ್ತರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವೆಲ್ಲವೂ ಕುರಿ ಮಾಂಸದ ಬಾಕ್ಸ್ಗಳು. ಬೇಕಾದರೂ ಚೆಕ್ ಮಾಡಿಕೊಳ್ಳಿ. ನಾವು ಬೇರೆ ಮಾಂಸವನ್ನು ಸಾಗಾಟ ಮಾಡುತ್ತಿಲ್ಲ. ಆರೋಪಗಳೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿ?ದದಾರೆ.
ಸದ್ಯ ಘಟನಾ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎರಡು ಕಡೆಯ ತಲಾ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಂಸದ ವಿವಿಧ ಅಂಗಾಂಗಗಳ ಸ್ಯಾಂಪಲ್ಗಳನ್ನು ಅಧಿಕಾರಿಗಳು ಪರೀಕ್ಷೆ ಮಾಡಲು ತೆಗೆದುಕೊಂಡಿದ್ದಾರೆ.