ಚನ್ನಪಟ್ಟಣ:- ಚನ್ನಪಟ್ಟಣ ಟೌನ್ ವ್ಯಾಪ್ತಿಯಲ್ಲಿ ಜನಸ್ಪಂದನಾ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ವಾರ್ಡ್ಗಳ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.
ಇದೇ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ತಾಲೂಕಿನಲ್ಲಿ 9 ಜನಸ್ಪಂದನಾ ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ. ಈಗಾಗಲೇ 10 ಸಾವಿರ ಅರ್ಜಿಗಳು ಬಂದಿವೆ. ನಿಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆಗೆ ಪರಿಹಾರ ನೀಡಲಾಗುತ್ತಿದೆ. ಚನ್ನಪಟ್ಟಣ ಇತಿಹಾಸದಲ್ಲೇ ಇಂತಹ ಒಂದು ಕಾರ್ಯಕ್ರಮ ಆಗಿರಲಿಲ್ಲ. ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡ್ತಿದ್ದೇವೆ. ನಿಮ್ಮ ಜೊತೆ ಇನ್ಮುಂದೆ ಸಂಪರ್ಕದಲ್ಲಿರುತ್ತೇನೆ ಎಂದು ತಿಳಿಸಿದರು.