ಮೈಸೂರು: ಮಹಿಷಾ ದಸರಾ ವೇದಿಕೆಯಲ್ಲಿ ಒಕ್ಕಲಿಗರು ಸಂಸ್ಕೃತಿ ಹೀನರೆಂದು ಹೇಳಿಕೆ ನೀಡಿದ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಅ.13 ರಂದು ಪುರಭವನದ ಆವರಣದಲ್ಲಿ ನಡೆದ ಮಹಿಷಾ ದಸರಾ ವೇದಿಕೆಯಲ್ಲಿ ಶ್ರೀರಾಮಚಂದ್ರ ಹಾಗೂ ಒಕ್ಕಲಿಗ ಸಮುದಾಯದ ಕುರಿತು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ದೇವರಾಜ ಪೊಲೀಸ್ ಠಾಣೆಯಲ್ಲಿ ಭಗವಾನ್ ಅವರ ವಿರುದ್ಧ ದೇಶದ್ರೋಹಿ ದೂರು ದಾಖಲಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅ.20 ರಂದು 153 ಹಾಗೂ 153ಎ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಈಗಾಗಲೇ ಹಲವು ಪ್ರಕರಣ ಎದುರಿಸುತ್ತಿರುವ ಭಗವಾನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ.