ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ (Team India) ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಬಿಸಿಸಿಐ ವ್ಯವಸ್ಥೆ ಮಾಡಿದ ಏರ್ ಇಂಡಿಯಾ ಚಾರ್ಟರ್ಡ್ ಫ್ಲೈಟ್ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿಗಳು ಹಾಗೂ ಕುಟುಂಬಸ್ಥರು ದೆಹಲಿಯ ಇಂದಿರಾ ಗಾಂಧಿ ಇಂಟರ್ನ್ಯಾಷನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಹೋಟೆಲ್ಗೆ ತೆರಳಿದ್ದು, ಬೆಳಗ್ಗೆ 11 ಗಂಟೆಗೆ ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.
ಅದ್ಧೂರಿ ಸ್ವಾಗತ:ಭಾರತ ತಂಡವು ಮುಂಜಾನೆ ಆಗಮಿಸಿದರೂ, ಏರ್ಪೋರ್ಟ್ನಲ್ಲಿ ಟೀಮ್ ಇಂಡಿಯಾವನ್ನು ಸ್ವಾಗತಿಸಲು ಅಭಿಮಾನಿಗಳು ಜಮಾಯಿಸಿದ್ದರು. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಘೋಷಣೆಗಳೊಂದಿಗೆ ಭಾರತ ತಂಡವನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಅದ್ಧೂರಿ ರೋಡ್ ಶೋ: ಗುರುವಾರ ಸಂಜೆ 5 ಗಂಟೆಗೆ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ನಿಂದ ಮೆರವಣಿಗೆ ಮೂಲಕ ತೆರೆದ ಬಸ್ನಲ್ಲಿ ಟೀಮ್ ಇಂಡಿಯಾ ವಾಂಖೆಡೆ ಸ್ಟೇಡಿಯಂಗೆ ಆಗಮಿಸಲಿದ್ದಾರೆ. ಅಲ್ಲದೆ ಈ ರೋಡ್ ಶೋನ ಬಳಿಕ ವಾಂಖೆಡೆ ಕ್ರೀಡಾಂಗಣಕ್ಕೆ ವಿಜಯೋತ್ಸವ ಆಚರಿಸಲಿದ್ದಾರೆ. ಇದೇ ವೇಳೆ ವಿಶ್ವ ಚಾಂಪಿಯನ್ನರಿಗೆ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ.