ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಹಿನ್ನೆಲೆ ಭಯಂಕರವಾಗಿದೆ ಎನ್ನುತ್ತಾರೆ ಪೆÇಲೀಸ್ ಅಧಿಕಾರಿಗಳು. ಆಕೆ ಕೇವಲ ನಟಿಯಾಗಿ ಗುರುತಿಸಿಕೊಂಡಿಲ್ಲ, ವಯಸ್ಕರ ಚಿತ್ರಗಳಲ್ಲೂ ನಟಿಸಿದ್ದಾರಂತೆ. ಅಲ್ಲದೇ ಬಾಲಿವುಡ್ ನ ಸಾಕಷ್ಟು ಜನರೊಂದಿಗೆ ಈಕೆ ಪರಿಚಿತಳಂತೆ. ಅವರು ಬೇಕು ಬೇಡಿಕೆಗಳನ್ನು ಈವರೆಗೂ ಪೂರೈಸುತ್ತಾ ಬಂದಿದ್ದಾರೆ ಎನ್ನುವ ರೋಚಕ ಮಾಹಿತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಆರತಿ ಹರೀಶ್ ಚಂದ್ರ ಮಿತ್ತಲ್ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಗೊತ್ತಾಗಿದೆ. ಅಲ್ಲದೇ ಸಾಕಷ್ಟು ಮಾಡೆಲ್ ಗಳು ಈಕೆಯ ಸಂಪರ್ಕದಲ್ಲಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದ್ದಂತೆಯೇ ಆರತಿಯನ್ನು ಬೆನ್ನತ್ತಿದ್ದ ಪೆÇಲೀಸರು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದರು.
ಅಪ್ನಾಪನ್ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿರುವ ಆರತಿ, ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಗುರುತಿಸಿಕೊಂಡವರು. ಇವುಗಳ ಜೊತೆಗೆ ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಗ್ರಾಹಕರ ಮಾರುವೇಶದಲ್ಲಿ ಆರತಿಯನ್ನು ಸಂಪರ್ಕಿಸಿರುವ ಪೆÇಲೀಸರು ನಂತರ ಆರತಿಯನ್ನು ಬಂಧಿಸಿದ್ದಾರೆ. ಇವರ ಜೊತೆ ರಾಕೆಟ್ ನಲ್ಲಿ ಇಬ್ಬರು ಮಾಡೆಲ್ ಗಳು ಇದ್ದರು ಎಂದು ಪೆÇಲೀಸರು ಮಾಹಿತಿ ನೀಡಿದ್ದರು.
ಪೆÇಲೀಸ್ ಅಧಿಕಾರಿ ಮನೋಜ್ ಸುತಾರ್ ಅವರಿಗೆ ಆರತಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಬಗ್ಗೆ ಸುಳಿವು ಸಿಕ್ಕಿತ್ತು. ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿ ತಮಗೆ ಇಬ್ಬರು ಹುಡುಗಿಯನ್ನು ಕಳುಹಿಸುವಂತೆ ಆರತಿಯನ್ನು ಸಂಪರ್ಕಿಸಿದ್ದಾರೆ. 60 ಸಾವಿರ ಬೇಡಿಕೆ ಇಟ್ಟು, ಹುಡುಗಿಯರನ್ನು ಕಳುಹಿಸುವುದಾಗಿ ಆರತಿ ತಿಳಿಸಿದ್ದರು. ಹಣ ಕೊಡುವುದಾಗಿಯೂ ಅಧಿಕಾರಿ ತಿಳಿಸಿದ್ದರು.
ಹೋಟೆಲ್ ರೂಮ್ ಗೆ ತೆರಳುವ ಮುನ್ನ ಸ್ವತಃ ಆರತಿಯೇ ಅಧಿಕಾರಿಗಳಿಗೆ ಕಾಂಡೋಮ್ ನೀಡಿದ್ದಾರೆ. ಇವೆಲ್ಲವನ್ನೂ ಪೆÇಲೀಸರು ರೆಕಾರ್ಡ್ ಮಾಡಿಕೊಂಡೇ ಆರತಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರತಿ ಜೊತೆ ಯಾರೆಲ್ಲ ಇದ್ದಾರೆ ಎನ್ನುವುದರ ಕುರಿತು ಪೆÇಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.