ಮೈಸೂರು: ಸಿಎಂ ಖರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು ಮಾಡಿದರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಷ್ಟು ದಿನ ಹೊರಗೆ ಬಾರದ ಹಗರಣ ಹೀಗ ಬಂದಿದ್ದು ಯಾಕೆ ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯ್ತು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಪರೋಕ್ಷ ಆರೋಪ ಮಾಡಿದರು.
ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಎಚ್.ಡಿ.ಕುಮಾರಸ್ವಾಮಿ ಸವಾಲು ಮಾಡಿದರು.
ಕಾನೂನು ಸಲಹೆಗಾರ ಈಗ ಎಂಎಲ್ ಎ ಆಗಿದ್ದಾರೆ. ಅವರು ಸಿಎಂ ಪರ ಸುಧೀರ್ಘವಾಗಿ ಮಾತನಾಡಿದ್ದಾರೆ
62 ಕೋಟಿ ರೂ ಪರಿಹಾರ ನೀಡಬೇಕು ಎಂದಿದ್ದಾರೆ. ಆದರೆ ಹಲವು ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ
ಆ ರೈತರು ಇನ್ನೂ ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ. ರೈತರನ್ನ ಬೀದಿಗೆ ನಿಲ್ಲಿಸಿದ್ದೀರಿ ಇದು ಸರೀನಾ. ನಿಮ್ಮ ಪತ್ನಿಯ ಹಣ ಕೇಳುತ್ತಾ ಇದ್ದೀರಲ್ಲಾ ಆ ದೇವರು ಮೆಚ್ಚುತ್ತಾನಾ ಎಂದು ತಿಳಿಸಿದರು.