ಬಳ್ಳಾರಿ: ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಅದರ ಅಗತ್ಯತೆ ಇಲ್ಲ ಎಂದ ಸಿದ್ದರಾಮಯ್ಯ ಪರ ಸಚಿವ ಜಮೀರ್ ಅಹಮ್ಮದ್ ಬ್ಯಾಟಿಂಗ್ ಮಾಡಿದ್ದಾರೆ.
ನಗರದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪಿಲ್ಲ ರಾಜೀನಾಮೆ ಕೊಡುವ ಅಗತ್ಯವಿಲ್ಲ.
ರಾಜ್ಯಪಾಲರ ಮೇಲೆ ರಾಜಕೀಯ ಒತ್ತಡವಿದೆ. ಹೀಗಾಗಿ ಪ್ರಾಸುಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಇದೊಂದು ರಾಜಕೀಯ ಷಡ್ಯಂತ್ರ. ಬಿಜೆಪಿ ಪಾದಯಾತ್ರೆಗೆ ಇಂಪ್ಯಾಕ್ಟ್ ತೋರಿಸಬೇಕಲ್ವವೇ. ಇದಕ್ಕಾಗಿ ರಾಜಕೀಯ ಒತ್ತಡದಿಂದ ಅನುಮತಿ ನೀಡಲಾಗಿದೆಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವದಿಲ್ಲ. ಬಹಳಷ್ಟು ಜನರು ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ನಿಲ್ಲಿಸಲು ಒತ್ತಡ ಹಾಕಿದ್ರು ಅದರೆ ಜಪರವಾಗಿರೋ ಗ್ಯಾರಂಟಿ ನಿಲ್ಲಲು ಸಾಧ್ಯವಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆಂದರು.