ಮೈಸೂರು:- ಹಗಲು ಹೊತ್ತು ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಅದೇ ಮನೆಗಳನ್ನು ಕಳ್ಳತನ ಮಾಡುತ್ತಿದ್ದ ಹಾಸನ ಮೂಲದ ಕುಖ್ಯಾತ ಮನೆಗಳ್ಳರನ್ನು ಮೈಸೂರು ಪೆÇಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲೆಯ ಹುಣಸೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ ತಿಂಗಳಿನಲ್ಲೇ 5, ಪಿರಿಯಾಪಟ್ಟಣ ಪೆÇೀಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಸೇರಿ ಮೈಸೂರು ಜಿಲ್ಲೆಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾದ ಮೂವರು ಮನೆಗಳ್ಳರನ್ನು ಬಂಧಿಸಿದ್ದೇವೆ.
ಬಂಧಿತ ಆರೋಪಿಗಳಲ್ಲಿ ಇಬ್ಬರು ಹಾಸನ ಮೂಲದವರು ಮತ್ತೊಬ್ಬ ಮೈಸೂರು ಜಿಲ್ಲೆಗೆ ಸೇರಿದವರಾಗಿದ್ದಾರೆ. ಮನೆಗಳ್ಳರ ಬಂಧನಕ್ಕೆ ಮೈಸೂರು ಜಿಲ್ಲಾ ಅಡಿಷನಲ್ ಎಸ್.ಪಿ.ನಂದಿನಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತಂಡದಲ್ಲಿ ಹುಣಸೂರು, ಪಿರಿಯಾಪಟ್ಟಣ ಪೆÇಲೀಸ್ ಇನ್ಸ್ಪೆಕ್ಟರ್ಗಳು ಇತರ ಸಿಬ್ಬಂದಿಗಳು ಇದ್ದರು ಎಂದು ತಿಳಿಸಿದರು. ಇದೇ ವೇಳೆ ಬಂಧಿತರಿಂದ 289ಗ್ರಾಂ. 15ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ 2.4 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿರುವ ಬಗ್ಗೆ ವಿವರ ನೀಡಿದರು.
ಬೀಗ ಹಾಕಿದ ಮನೆಗಳೇ ಟಾರ್ಗೆಟ್: ಬಂಧಿತ ಮೂವರು ಹಲವು ಬಾರಿ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದರು. ಮತ್ತದೇ ಚಾಳಿ ಮುಂದುವರೆಸಿದ್ದಾರೆ. ಬೆಳಗಿನ ಸಮಯದಲ್ಲಿ ಆರೋಪಿಗಳು ಬೀಗ ಹಾಕಿದ ಮನೆಗಳ ಮುಂದೆ ಬಿದ್ದಿರುವ ದಿನಪತ್ರಿಕೆ ಹಾಗೂ ಹಾಲಿನ ಪ್ಯಾಕೆಟ್ಗಳ ಸುಳಿವಿನ ಮೇಲೆ ಮನೆಯಲ್ಲಿ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡು ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದರು. ರಾತ್ರಿ ವೇಳೆ ಅದೇ ಮನೆಗಳನ್ನು ಕಳ್ಳತನ ಮಾಡುತ್ತಿದ್ದರು ಎಂದು ತಿಳಿಸಿದರು.